ಅಂಬಿಗಾ ನಾ ನಿನ್ನ ನಂಬಿದೇ

ಶ್ರೀ ಪುರಂದರ ದಸರು

ರಾಗ: ಶಂಕರಭರಣ

ತಾಳ: ಆಟ

 

ಅಂಬಿಗಾ ನಾ ನಿನ್ನ ನಂಬಿದೇ

ಜಗದಂಬ ರಮಣ ನಿನ್ನ ನಂಬಿದೇ

 

ತುಂಬಿದ ಹರಿಗೋಲಂಬಿಗ ಅದ ಕೊಂಬತ್ತು ಛಿದ್ರವು ಅಂಬಿಗಾ

ಸಂಭ್ರಮದಿಂ ನೊಡಂಬಿಗ ಅದರಿಂಬು ನೊಡೀ ನಡೆಸಂಬಿಗಾ        ||೧||

 

ಹೊಳೆಯ ಭರವ ನೊಡಂಬಿಗಾ ಅದಕೆ ಸೆಳವು ಘನವೈಯ್ಯ ಅಂಬಿಗಾ

ಸುಳಿಯೊಳು ಮುಳುಗಿದೆ ಅಂಬಿಗ ಎನ್ನ ಸೆಳೆದುಕೊಂಡೊಯ್ಯೊ ನೀನಂಬಿಗ        ||೨||

 

ಆರು ತೆರೆಯ ನೋಡಂಬಿಗ ಅದು ಮೀರಿ ಬರುತಲಿದೆ ಅಂಬಿಗ

ಯಾರಿಂದಲಾಗದು ಅಂಬಿಗ ಅದ ನಿವಾರಿಸಿ ದಾಟಿಸೊ ಅಂಬಿಗ                ||೩||

 

ಸತ್ಯವೆಂಬುದೆ ಹುಟ್ಟಂಬಿಗ ಸದಾ ಭಕ್ತಿಯೆಂಬುದೆ ಪಥವಂಬಿಗಾ

ನಿತ್ಯ ಮುರುತಿ ಪುರಂದರ ವಿಟ್ಠಲ ನಮ್ಮಾ ಮುಕ್ತಿಮಂಟಪಕೊಯ್ಯೊ ಅಂಬಿಗ ||೪||